ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಕಾಲೇಜುಗಳ ಮೇಲೆ ಇಡಿ ದಾಳಿ

Most read

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ  ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ ಎಸ್ ಐಟಿ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜತೆಗೆ ನೆಲಮಂಗಲದ ಟಿ. ಬೇಗೂರಿನಲ್ಲಿರುವ ಮೆಡಿಕಲ್‌ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಲ್ಲ ಕಾಲೇಜುಗಳಲ್ಲಿ ದಾಖಲೆಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. 9 ಕಾರುಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

More articles

Latest article