ಹನಿ ಟ್ರ್ಯಾಪ್‌: ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ; ಡಿಕೆ ಶಿವಕುಮಾರ್‌

Most read

ಮಡಿಕೇರಿ: ಹನಿ ಟ್ರ್ಯಾಪ್‌ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಸಚಿವರೇ ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, ಸರ್ಕಾರದ ಸಚಿವರಿಗೆ ರಕ್ಷಣೆ ಇಲ್ಲವೇ ಎಂದು ಇಲ್ಲಿನ ಭಾಗಮಂಡಲದಲ್ಲಿ ಕೇಳಲಾದ ಪ್ರಶ್ನೆಗೆ ಅವರು ರಕ್ಷಣೆ ಇಲ್ಲವೆಂದು ಯಾರು ಹೇಳಿದ್ದು ಎಂದು ಮರು ಪ್ರಶ್ನಿಸಿದರು.

ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.

ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, ‘ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆ. ಆರ್.ಅಶೋಕ್ ಗೆ, ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣೋ ಮಾರಾಯ ಎಂದು ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ ಎಂದು ವ್ಯಂಗ್ಯವಾಡಿದರು.

More articles

Latest article