ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್: ಸತೀಶ್ ಜಾರಕಿಹೊಳಿ

Most read

ಬೆಂಗಳೂರು: ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ತಿಳಿಸಿದರು.

ನಮ್ಮವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರೂ ಹನಿ ಟ್ರ್ಯಾಪ್‌ನಲ್ಲಿ ಸಿಲುಕಿದ್ದಾರೆ.‌ ಇದು ಇಲ್ಲಿಗೆ ನಿಲ್ಲಬೇಕು.‌ ಈ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಜೊತೆ ಮಾತನಾಡಿದ್ದೇನೆ ಎಂದರು. ವಿದ್ಯುತ್ ದರ ಏರಿಕೆ ವಿಚಾರದ ಪ್ರತಿಕ್ರಿಯಿಸಿದ ಅವರು, ಸಂಬಂಧ ಪಟ್ಟ ಇಲಾಖೆ ಇದೆ. ಆ ಇಲಾಖೆ‌ ಸಚಿವರು ಪ್ರತಿಕ್ರಿಯೆ ಕೊಡುತ್ತಾರೆ ಎಂಷ್ಟೇ ಉತ್ತರಿಸಿದರು.

More articles

Latest article