ಗೌರವ ಡಾಕ್ಟರೇಟ್ ಪದವಿ ಹಿಂಪಡೆಯಲು ಕರ್ನಾಟಕ ಮುಕ್ತ ವಿವಿಗೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಬೆಂಗಳೂರು: ತಮಗೆ ನೀಡಿರುವ “ಗೌರವ ಡಾಕ್ಟರೇಟ್ ಡಿ.ಲಿಟ್ ” ಗೌರವ ಪದವಿಯನ್ನು  ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಪತ್ರ ಬರೆದಿದ್ದಾರೆ.

ಮಾರ್ಚ್‌ 27 ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ. ತಮ್ಮ  ವಿಶ್ವವಿದ್ಯಾನಿಲಯ ನನಗೆ ಪ್ರಧಾನ ಮಾಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸದೇ, ನಾನು ಸ್ವಯಂಇಚ್ಛೆಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಸ್ವಾಗತಿಸುತ್ತೀರೆಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನ ಮಾಡುವ ಮೂಲಕ ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದಂತಹ ಹೊಣೆಗಾರಿಕೆ ನನ್ನ ಮೇಲಿದ್ದು, ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇರುತ್ತದೆ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.

More articles

Latest article

Most read