ಪುಣೆಯಲ್ಲಿ ಭೀಕರ ಅಪಘಾತ; 9 ಮಂದಿ ಸ್ಥಳದಲ್ಲೇ ದುರ್ಮರಣ

Most read

ಪುಣೆ: ಮಿನಿ ವ್ಯಾನ್‌ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್, ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದು 9 ಮಂದಿ ಮೃತಪಟ್ಟಿರುವ ದುರಂತ ಘಟನೆ ಶುಕ್ರವಾರ ಬೆಳಿಗ್ಗೆ ಪುಣೆ–ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ ಪುಣೆ ಹೆದ್ದಾರಿಯ ನಾರಾಯಣಗಾಂವ್ ಬಳಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಮಿನಿವ್ಯಾನ್ ನಾರಾಯಣಗಾಂವ್ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟೆಂಪೊ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ಖಾಲಿ ಬಸ್‌ಗೆ ವ್ಯಾನ್ ಡಿಕ್ಕಿ ಹೊಡೆದಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ. ಮಿನಿವ್ಯಾನ್‌ನಲ್ಲಿದ್ದ ಎಲ್ಲ ಒಂಬತ್ತು ನಿವಾಸಿಗಳು ಸಾವಿಗೀಡಾಗಿದ್ದಾರೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಬಸ್‌ ನಲ್ಲಿ ಯಾರೊಬ್ಬರೂ ಇರಲಿಲ್ಲ ಎಂದೂ ತಿಳಿದು ಬಂದಿದೆ.

More articles

Latest article