ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ ಬೆಂಗಳೂರಿನ ಐವರು ಸಾವು

ಡೆಹ್ರಾಡೂನ್, ಅ.30: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಐವರು ಪ್ರಯಾಣಿಕರು ಹಾಗೂ ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಚಮೋಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುರ್ಜಿತ್ ಸಿಂಗ್ ಪನ್ವಾರ್ ತಿಳಿಸಿದ್ದಾರೆ.

ಟ್ರಾನ್ಸ್ ಭಾರತ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದಾಗ ಜೋಶಿಮಠ ಸಮೀಪ ಪತನಗೊಂಡಿದೆ.

ಮೃತರ ಗುರುತು ಪತ್ತೆ

ಹೆಲಿಕಾಪ್ಟರ್​​ನಲ್ಲಿದ್ದವರನ್ನು ದೆಹಲಿ ಮೂಲದ ಕ್ಯಾಪ್ಟನ್ ಹಿಮಾಂಶು ಸಭರ್ವಾಲ್ (48), ಸಿಸಿಬಿ ಇನ್ಸ್​ಪೆಕ್ಟರ್​ ಅರುಣ್ ಸಾಲುಂಕೆ(44) ಸೇರಿದಂತೆ ವಕೀಲರಾದ ಸುಧೀರ್ ಕೆ.(50), ಶಂಕರ್ ಗೌಡ(39), ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎನ್ನಲಾದ ಹೆಚ್.ಎಸ್.ನಟರಾಜ್(51) ಹಾಗೂ ಗುತ್ತಿಗೆದಾರ ಪ್ರತಾಪ್ ಗೌಡ(41) ಎಂಬುವರು ನಾಪತ್ತೆಯಾಗಿದ್ದರು. ಇದೀಗ ಹೆಲಿಕಾಪ್ಟರ್ ಪತ್ತೆಯಾಗಿದ್ದು, ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ಧಾರೆ ಎಂದು ಎಸ್​​ಪಿ ದೃಢಪಡಿಸಿದ್ದಾರೆ.

ಹೆಲಿಕಾಪ್ಟರ್​ನಲ್ಲಿದ್ದ ಪ್ರಯಾಣಿಕರು ಬೆಂಗಳೂರು ಮೂಲದವರಾಗಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಪೊಲೀಸ್, ಎಸ್‌ಡಿಆರ್‌ಎಫ್, ಸೇನೆ ಮತ್ತು ಐಟಿಬಿಪಿ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ” ಎಂದು ಯುಸಿಎಡಿಎ ಸಿಇಒ, ಪ್ರತೀಕ್ ಜೈನ್ ಈ ಮೊದಲು ಮಾಹಿತಿ ನೀಡಿದ್ದರು.

2007ನೇ ಬ್ಯಾಚ್ ಅಧಿಕಾರಿಯಾಗಿರುವ ಅರುಣ್ ಸಾಲುಂಕೆಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ರಾಮಮೂರ್ತಿನಗರ ನಿವಾಸಿಯಾಗಿದ್ದಾರೆ. ಇಂದಿರಾನಗರ, ಬಾಣಸವಾಡಿ ಸೇರಿದಂತೆ ಹಲವು ಠಾಣೆಗಳಲ್ಲಿ ಇನ್ಸ್​ಪೆಕ್ಟರ್​ ಆಗಿ ಕಾರ್ಯನಿರ್ವಹಿಸಿದ್ದರು. ಕೆಲ ತಿಂಗಳಿಂದ ಸಿಸಿಬಿಯ ವಿಶೇಷ ವಿಚಾರಣಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಬಾಣಸವಾಡಿ ಇನ್ಸ್​ಪೆಕ್ಟರ್​ ಆಗಿದ್ದಾಗ ಸಾರ್ವಜನಿಕರ ಉತ್ತಮ ಪ್ರತಿಕ್ರಿಯೆ ಅಧಾರಿತ ಬೆಂಗಳೂರು ಪೊಲೀಸರ ಲೋಕಸ್ಪಂದನ ಪ್ರಕ್ರಿಯೆಯಡಿ ಠಾಣೆಗೆ ಅತ್ಯುತ್ತಮ ಪೊಲೀಸ್ ಠಾಣೆ ಎಂಬ ಗೌರವ ದೊರೆತಿತ್ತು. ಬೆಳಗಾವಿ ಮೂಲದ ಅರುಣ್ ಅವರು ಎಂ.ಎಸ್.ರಾಮಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದರು.

ಜೋಶಿಮಠ ಕಣಿವೆಯಲ್ಲಿ ಸಂಪರ್ಕ ಕಡಿತ

VT-HCX ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್ ಬದರಿನಾಥದಿಂದ ಡೆಹ್ರಾಡೂನ್‌ನ ಸಹಸ್ರಧಾರಾ ಹೆಲಿಪ್ಯಾಡ್‌ಗೆ ತೆರಳುತ್ತಿತ್ತು.

ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (ಯುಸಿಎಡಿಎ) ಪ್ರಕಾರ, ಮಧ್ಯಾಹ್ನ ಸುಮಾರು 1.14ಕ್ಕೆ ಹೆಲಿಕಾಪ್ಟರ್ ಹಾರಾಟ ಆರಂಭಿಸಿತ್ತು. ಜೋಶಿಮಠ ಕಣಿವೆಯ ಮೇಲೆ ಹಾರುತ್ತಿದ್ದಾಗ ಹೆಲಿಕಾಪ್ಟರ್‌ನೊಂದಿಗೆ ಸಂಪರ್ಕ ಕಡಿತಗೊಂಡಿದ್ದು, ಅದರ ಟ್ರ್ಯಾಕಿಂಗ್ ವ್ಯವಸ್ಥೆಯೂ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು.

ಆದರೆ, ಮತ್ತೊಂದು ವರದಿಯಲ್ಲಿ ಹೆಲಿಕಾಪ್ಟರ್ ಮಧ್ಯಾಹ್ನ 2.15ರ ಸುಮಾರಿಗೆ ಬದರಿನಾಥದಿಂದ ಹೊರಟಿತ್ತು ಎಂದು ಹೇಳಲಾಗಿದೆ. ಹೀಗಾಗಿ ಹಾರಾಟ ಆರಂಭಿಸಿದ ಸಮಯದ ಕುರಿತು ವರದಿಗಳಲ್ಲಿ ವ್ಯತ್ಯಾಸ ಕಂಡುಬಂದಿದೆ.

ಹಿಮಪಾತದ ನಡುವೆ ರಕ್ಷಣಾ ಕಾರ್ಯಾಚರಣೆ

ಜೋಶಿಮಠ ಸಮೀಪದ ಹಾಥಿ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿರುವ ಸಾಧ್ಯತೆಯ ಬಗ್ಗೆ ಭಾರತೀಯ ಸೇನೆಯು ಚಮೋಲಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಸೇನೆ, ಜಿಲ್ಲಾಡಳಿತ ಹಾಗೂ ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (ಎಸ್‌ಡಿಆರ್‌ಎಫ್) ಜಂಟಿಯಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದವು.

ಪರ್ವತ ಪ್ರದೇಶದ ದುರ್ಗಮ ಭೌಗೋಳಿಕ ಪರಿಸ್ಥಿತಿ ಹಾಗೂ ಹಿಮಪಾತದಿಂದಾಗಿ ಕಾರ್ಯಾಚರಣೆಗೆ ಅಡಚಣೆ ಎದುರಾಗಿತ್ತು. ಆದರೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಹೆಲಿಕಾಪ್ಟರ್‌ನಲ್ಲಿದ್ದ ಆರು ಮಂದಿಯ ಮೃತದೇಹಗಳನ್ನು ಪತ್ತೆಹಚ್ಚಿವೆ.

ದುರಂತದ ಬಗ್ಗೆ ಮುಖ್ಯಮಂತ್ರಿ ಧಾಮಿ ಪ್ರತಿಕ್ರಿಯೆ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಜೋಶಿಮಠ ಸಮೀಪದ ಛಾಯ್ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿರುವುದನ್ನು ದೃಢಪಡಿಸಿದ್ದರು. ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಎಸ್‌ಡಿಆರ್‌ಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿರುವುದಾಗಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದರು.

ಸಂಸ್ಥೆಯ ಎಲ್ಲ ಹೆಲಿಕಾಪ್ಟರ್‌ಗಳ ಹಾರಾಟ ಸ್ಥಗಿತ

ದುರಂತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಎಲ್ಲ ಹೆಲಿಕಾಪ್ಟರ್‌ಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ. ಮಾಹಿತಿಯ ಪ್ರಕಾರ, ಯಾತ್ರಾರ್ಥಿಗಳನ್ನು ಬದರಿನಾಥಕ್ಕೆ ಕರೆದೊಯ್ದಿದ್ದ ಹೆಲಿಕಾಪ್ಟರ್ ವಾಪಸ್ ಬರುತ್ತಿದ್ದಾಗ ದುರಂತ ಸಂಭವಿಸಿದೆ.

More articles

Latest article

Most read