ಜೈಲು ಅಧಿಕಾರಿಗಳ ಸಹಕಾರ ಇಲ್ಲದೆ ವಸ್ತುಗಳು ಜೈಲು ಪ್ರವೇಶಿಸಲು ಸಾಧ್ಯವೇ?

Most read

ಬೆಂಗಳೂರು: ಜೈಲು ಅಧಿಕಾರಿಗಳ ನೆರವು ಇಲ್ಲದೆ ಕಾನೂನು ಬಾಹಿರ ವಸ್ತುಗಳು ಜೈಲಿನ ಒಳಗೆ ಹೋಗಲು ಹೇಗೆ ಸಾಧ್ಯ ಎಂದು ಹೈಕೋರ್ಟ್ ಪ್ರಶ್ನಿಸಿದೆ.
ನನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂದಿಯಾಗಿರುವ ರೌಡಿ, ವಿಲ್ಸನ್ ಗಾರ್ಡನ್ ನಾಗ ಅರ್ಜಿ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಜೈಲಿನ ಅಧಿಕಾರಿಗಳು ಶಾಮೀಲಾಗದಿದ್ದರೆ ಇಂತಹ ಘಟನೆಗಳು ನಡೆಯವುದು ಸಾಧ್ಯವೇ ಇಲ್ಲ. ಆರೋಪಿಗಳಿಗೆ ಕುಳಿತುಕೊಳ್ಳಲು ಕುರ್ಚಿ ಮತ್ತಿತರ ಸವಲತ್ತುಗಳನ್ನು ಸರ್ಕಾರಿ ಅಧಿಕಾರಿಗಳೇ ಒದಗಿಸಿ ಕೊಟ್ಟಿದ್ದಾರೆ. ಅದಕ್ಕಾಗಿ ಜೈಲಿನ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಲಿ ಎಂದು ಹೇಳಿದರು. ಅರ್ಜಿದಾರರು ಕಾಫಿ ಕುಡಿಯುವುದು ತಪ್ಪೇ? ಅವರ ವಿರುದ್ಧ ಬಲವಂತದ ಕ್ರಮವನ್ನು ಏಕೆ ತೆಗೆದುಕೊಳ್ಳುತ್ತೀರಿ ಎಂದು ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರನ್ನು ಪ್ರಶ್ನಿಸಿದರು. ಹಾಗೆಯೇ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಿದರು.
ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಒಳಗಡೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ಧೂಮಪಾನ ಮಾಡುತ್ತಿದ್ದ ಸಂದರ್ಭದಲ್ಲಿ ಅವರ ಜೊತೆ ವಿಲ್ಸನ್ ಗಾರ್ಡನ್ ನಾಗ ಕುಳಿತಿದ್ದ ಫೋಟೋ ವೈರಲ್ ಆಗಿತ್ತು.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು 2024ರ ಆಗಸ್ಟ್ 26ರಂದು ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ 2022ರ ಅಡಿಯಲ್ಲಿ ದೂರು ದಾಖಲಿಸಿದ್ದರು.

More articles

Latest article