Saturday, July 27, 2024

HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ

Most read

ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ.

ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

2023ರ ಆಗಸ್ಟ್‌ 18ರಂದು ಅಧಿಸೂಚನೆ ಹೊರಡಿಸಿದ್ದ ಸಾರಿಗೆ ಇಲಾಖೆಯು ರಾಜ್ಯದಲ್ಲಿ 2019ರ ಏ.1ಕ್ಕೂ ಮುನ್ನ ನೋಂದಣಿಯಾದ ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ನವೆಂಬರ್‌ 17ರವರೆಗೆ ಕಾಲಾವಕಾಶ ನೀಡಿತ್ತು. ರಾಜ್ಯದಲ್ಲಿಅಂತಹ ಸುಮಾರು 2 ಕೋಟಿ ವಾಹನಗಳಿದ್ದು, ನವೆಂಬರ್‌ 17 ರ ಗಡುವಿನೊಳಗೆ ಬಹುತೇಕ ಹಳೆ ವಾಹನಗಳ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬಹುದೆಂದು ಇಲಾಖೆ ನಿರೀಕ್ಷಿಸಿತ್ತು. ಆದರೆ, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಜನರಿಂದ ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೆಬ್ರವರಿ 17 ರವರೆಗೆ ಗಡುವು ವಿಸ್ತರಿಸುವಂತೆ ಸೂಚಿಸಿದ್ದರು. ಅದರಂತೆ ಸಾರಿಗೆ ಇಲಾಖೆಯು ಫೆಬ್ರವರಿ 17 ರವರೆಗೆ ಗಡುವು ವಿಸ್ತರಿಸಿತ್ತು. ಆ ನಂತರವೂ ಸಾರ್ವಜನಿಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಹಿಂದೇಟು ಹಾಕಿದ್ದು, 2 ಕೋಟಿ ಹಳೆ ವಾಹನಗಳಲ್ಲಿ ಈವರೆಗೆ ಸುಮಾರು 18.5 ಲಕ್ಷ ವಾಹನಗಳಿಗೆ ಅಂದರೆ ಶೇ.9 ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆಯಾಗಿದೆ. ಈಗ ಮತ್ತೆ ಸಮಯ ವಿಸ್ತರಿಸಿದ್ದು, ಅಧಿಕೃತ ಆದೇಶ ಬಾಕಿ ಇದೆ.

More articles

Latest article