Wednesday, December 11, 2024

ಹುಬ್ಬಳ್ಳಿ-ಧಾರವಾಡ ಪಾಲಿಕೆ ಪ್ರತ್ಯೇಕ; ಹಾದಿ ಸುಗಮ

Most read

ಬೆಂಗಳೂರು:  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪತ್ಯೇಕಿಸಿ 2 ಮಹಾನಗರ ಪಾಲಿಕೆಗಳನ್ನಾಗಿ ಮಾಡುವ ಸಂಬಂಧ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ. ಎಸ್.‌ ಸುರೇಶ (ಬೈರತಿ)ಯವರ ಸಮ್ಮುಖದಲ್ಲಿ ಸಭೆ ಜರುಗಿತು.

ಧಾರವಾಡ ಕ್ಷೇತ್ರದ ಶಾಸಕರಾದ ವಿನಯ್‌ ಕುಲಕರ್ಣಿ,  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರ ನಿಯೋಗದೊಂದಿಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ಪ್ರತ್ಯೇಕಿಸುವ ಸಂಬಂಧ ಮುಂದಿನ ಸಚಿವ ಸಂಪುಟಕ್ಕೆ ಕಡತವನ್ನು ಮಂಡಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಮತ್ತು ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಗಳನ್ನಾಗಿ ಮಾಡಲು ಸಮ್ಮತಿಸಿದ್ದು, ಈಗಾಗಲೇ ಸಂಬಂಧಪಟ್ಟವರಿಗೆ ಮೌಖಿಕವಾಗಿ ಸೂಚನೆಯನ್ನು ನೀಡಿದ್ದಾರೆ ಎಂದು ಬೈರತಿ ಸುರೇಶ ಅವರು ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ತಿಳಿಸಿದರು. ತಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಕೂಡಲೇ ಸ್ಪಂದಿಸಿದ ಸಚಿವರ ಕಾರ್ಯವೈಖರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದರು.

More articles

Latest article