ಹುಬ್ಬಳ್ಳಿ: ಅಂಜಲಿ ಹಂತಕ ಗಿರೀಶ ಅಲಿಯಾಸ್ ವಿಶ್ವನ ಬಂಧನ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗಿರೀಶ್ ಬಂಧನವನ್ನು ಹುಬ್ಬಳ್ಳಿ ಪೊಲೀಸ್ ಕಮಿಷನರ್ ರೇಣುಕಾ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಖಚಿತಪಡಿಸಿದ್ದು, ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆತನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಎಂಬ ಅಮಾಯಕ ಯುವತಿಯ ಕೊಲೆ ನಡೆದಿತ್ತು. ಕೊಲೆಗಡುಕ ಅಂಜಲಿ ಮನೆಗೇ ನುಗ್ಗಿ ಹತ್ಯೆ ಮಾಡಿ ಪರಾರಿಯಾಗಿದ್ದ.

ಹುಬ್ಬಳ್ಳಿ ಪೊಲೀಸರು ಗಿರೀಶ್ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಆತನಿಗಾಗಿ ಬಲೆ ಬೀಸಿದ್ದರು. ನಿಖರ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಗಿರೀಶ್. ಅಡಗಿದ್ದ ಸ್ಥಳವನ್ನು ಪತ್ತೆ ಮಾಡಿದ ಪೊಲೀಸರು ಆತನನ್ನು ಬಂಧಿಸಿ ಹುಬ್ಬಳ್ಳಿಗೆ ಕರೆತರುತ್ತಿದ್ದಾರೆ.

ನೇಹಾ ಹಿರೇಮಠ ಎಂಬ ಯುವತಿಯ ದಾರುಣ ಕೊಲೆಯ ನಂತರ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆ ನಡೆದಿದ್ದು, ಹುಬ್ಬಳ್ಳಿ ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಕರ್ತವ್ಯಲೋಪದ ಕಾರಣದಿಂದ ಈಗಾಗಲೇ ಓರ್ವ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

More articles

Latest article

Most read