ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ತಮ್ಮನ್ನು ACP ಚಂದನ್ ಕುಮಾರ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.
ಜುಲೈ 26ರಂದು ರಾತ್ರಿ 9 ಗಂಟೆಗೆ ನನ್ನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ಅವಮಾನವೀಯವಾಗಿ ನೆಡೆಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಬಟ್ಟೆ ಬಿಚ್ಚಿಸಿ ನಗ್ನಗೊಳಿಸಿ ಲೈಂಗಿಕ ಕಿರುಕುಳ ನೀಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದೂ ದೂರಿನಲ್ಲಿ ಆಪಾದಿಸಿದ್ಧರು.
ACP ಚಂದನ್ ಕುಮಾರ್ ಮತ್ತಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.
4 ವಾರಗಳಲ್ಲಿ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಸೂಚನೆ ನೀಡಿದ್ದಾರೆ.