ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ, ಮುಸ್ಲಿಂ ಮೀಸಲಾತಿ, ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳುವ ಬದಲು ಹಾಸನ ಜೆಡಿಎಸ್ ಅಭ್ಯರ್ಥಿ ಬಗ್ಗೆ ಮಾತಾಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸುಳ್ಳು ಹೇಳುವ ಬದಲು ನೂರಾರು ಹೆಣ್ಣುಮಕ್ಕಳನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಕೊಡಿ ಎಂದು ಆಗ್ರಹಿಸಿದ್ದಾರೆ.
ನೊಂದ ನೂರಾರು ಹೆಣ್ಣುಮಕ್ಕಳಿಗೆ ನ್ಯಾಯ ಬೇಕು ಎಂದು ನಿಮ್ಮ ಬಿಜೆಪಿ ಮೂಲಕ ಯಾವಾಗ ದೇಶಾದ್ಯಂತ ಹೋರಾಟಕ್ಕೆ ಇಳಿಯುತ್ತಿದ್ದೀರಿ ಎಂದು ಖರ್ಗೆ ಪ್ರಶ್ನಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೊಂದವರ ಮನೆಗಳಿಗೆ ಯಾವಾಗ ಭೇಟಿ ಮಾಡುತ್ತಾರೆ ಹೇಳಿ ಎಂದು ಅವರು ಪ್ರಶ್ನಿಸಿದ್ದಾರೆ.