ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರವಾಗಿ ಚರ್ಚಿಸಲು ಇದೇ ಜೂ.27ರಂದು ಬಿಡದಿಗೆ ಬರುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಹ್ವಾನಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಬಿಡದಿ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಚರ್ಚಿಸಲು ಬೈರಮಂಗಲಕ್ಕೆ ಬರುವಂತೆ ಕೋರಲಾಗಿದ್ದ ಪತ್ರಕ್ಕೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಂದ ಯಾವುದೇ ಪ್ರತ್ಯುತ್ತರ ಬಾರದ ಹಿನ್ನೆಲೆಯಲ್ಲಿ ಅವರು ಮತ್ತೊಂದು ಪತ್ರವನ್ನು ಮುಖ್ಯಮಂತ್ರಿಗಳಿಗೆ ಬರೆದಿದ್ದಾರೆ. ನಾಳೆ ಮಧ್ಯಾಹ್ನದ ತನಕ ಬೈರಮಂಗಲದಲ್ಲಿ ಕಾಯುತ್ತೇನೆ ಎಂದರು.
ನೊಂದ ರೈತರ ಸಮ್ಮುಖದಲ್ಲಿಯೇ ಚರ್ಚೆ ನಡೆಯಬೇಕು ಎಂಬ ತಮ್ಮ ನಿಲುವಿಗೆ ಬದ್ಧ. ಬಿಡದಿ ಟೌನ್‌ಶಿಪ್‌ಗೆ ಪರ- ವಿರೋಧದ ಪ್ರತಿಭಟನೆಗಳು ನಡೆಯುತ್ತಿದೆ. ರೈತರೇ ನನ್ನ ಬಳಿ ಬಂದು ಜಮೀನು ಕೊಡುವುದಿಲ್ಲ ಎಂದು ಹೇಳಿದ್ದರು. ರೈತರು ಕೊಡಲು ಇಷ್ಟವಿದ್ದರೆ ಕೊಡಲಿ ನನ್ನ ಅಭ್ಯಂತರವೇನಿಲ್ಲ. ಡಿ.ಕೆ.ಶಿವಕುಮಾರ್ ವಿರುದ್ಧ ಹೋರಾಟವೆನಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

