ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಹೇಮಂತ್ ಹುಬ್ಬಳ್ಳಿಗೆ ವರ್ಗಾವಣೆಯಾಗಿದ್ದು, ಅಲ್ಲಿನ ಹೆಸ್ಕಾಂ ಗೆ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಎನ್. ಹೇಮಂತ್ ಜಿಲ್ಲಾ ಪಂಚಾಯತ್ ಸಿಇಓ ಆಗಿ ಮಾತ್ರವಲ್ಲದೆ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ನಿಂದ ನಡೆಯುವ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿಯು ಇದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಿಷಿ ಆನಂದ್ ರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ರಿಷಿ ಆನಂದ್ ವಿಜಯಪುರದ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ತಕ್ಷಣವೇ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ಅಧಿಕಾರ ವಹಿಸಿಕೊಳ್ಳಲು ಇಲಾಖೆ ಆದೇಶಿಸಿದೆ
ಹೇಮಂತ್ ಅವರು ತಮ್ಮ ದಕ್ಷತೆಯಿಂದ ಶಿವಮೊಗ್ಗ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ವಿಶೇಷವಾಗಿ ಹಳ್ಳ ಹಿಡಿದು ಹೋಗಿದ್ದ ಕುವೆಂಪು ವಿವಿಯ ಆಡಳಿತವನ್ನು ವಹಿಸಿಕೊಂಡ ಬಳಿಕೆ ಹದಗೆಟ್ಟಿದ್ದ ವ್ಯವಸ್ಥೆ ಸರಿಪಡಿಸುತ್ತಿದ್ದರು. ಈಗ ಇವರ ವರ್ಗಾವಣೆ ನಕಾರಾತ್ಮಕ ಪರಿಣಾಮ ಬೀರಿ ಮತ್ತೆ ಯೂನಿವರರ್ಸಿಟಿ ವ್ಯವಸ್ಥೆ ಹದಗೆಡಬಹುದು ಎಂಬ ಆತಂಕ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ವ್ಯಕ್ತವಾಗಿದೆ. ಡೌನ್ ಟು ಅರ್ತ್ ಅಧಿಕಾರಿಯಾಗಿದ್ದ ಹೇಮಂತ್ ಅವರ ಕಾರ್ಯವೈಖರಿ ಅತ್ಯಂತ ಮಾದರಿಯಾಗಿತ್ತು.

