ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳ್ಳಲಿದೆ; ಬಜರಂಗ್ ಪೂನಿಯಾ

Most read

ನವದೆಹಲಿ: ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಲಿದೆ ಎಂದು ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳಿಗೆ ಅಮಾನತುಗೊಂಡಿರುವ ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಬಜರಂಗ್ ಪೂನಿಯಾ ಪ್ರತಿಕ್ರಿಯಿಸಿದ್ದಾರೆ.

ಮಾರ್ಚ್ 10ರಂದು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಟ್ರಯಲ್ಸ್‌ನಲ್ಲಿ ಮಾದರಿ ನೀಡಲು ನಿರಾಕರಿಸುವ ಮೂಲಕ ಬಜರಂಗ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ಎನ್‌ಡಿಎ-ನಾಡಾ) ತಿಳಿಸಿದೆ. ಇದೇ ಆರೋಪದಲ್ಲಿ ಏಪ್ರಿಲ್ 23ರಂದು ಬಜರಂಗ್ ಅವರನ್ನು ನಾಡಾ ಅಮಾನತು ಮಾಡಿತ್ತು. ಹಾಗೆಯೇ ವಿಶ್ವ ಕುಸ್ತಿ ಒಕ್ಕೂಟವೂ (ಯುಡಬ್ಲ್ಯುಡಬ್ಲ್ಯು) ಅಮಾನತು ಮಾಡಿತ್ತು.

ನನಗೆ ಆಘಾತವಾಗಿಲ್ಲ. ಕಳೆದ ಒಂದು ವರ್ಷದಿಂದ ವಿವಾದ  ಕುರಿತು ಚರ್ಚೆ ನಡೆಯುತ್ತಿದೆ. ನಾಡಾಗೆ ಮಾದರಿ ನೀಡಲು ನಾನು ನಿರಾಕರಿಸಿಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಉದ್ದೀಪನ ಮದ್ದು ಪರೀಕ್ಷೆ ನಡೆಸಲು ವಾಯಿದೆ ಮುಗಿದ ಕಿಟ್‌ನೊಂದಿಗೆ ನನ್ನ ಮನೆಗೆ ಆಗಮಿಸಿದ್ದರು. ಈ ವಿಷಯವನ್ನು ಹಿಂದೆಯೇ ಹಂಚಿಕೊಂಡಿದ್ಧೇನೆ ಎಂದರು. ವಾಯಿದೆ ಮುಗಿದ ಕಿಟ್ ಅನ್ನು ಆಟಗಾರನಿಗೆ ನೀಡುವಂತಿಲ್ಲ. ಇದು  ನನ್ನ ತಂಡದ ಗಮನಕ್ಕೂ ಬಂದಿದೆ. 2020, 2021, 20220 Jun ಕಿಟ್ ನೀಡಲಾಗಿತ್ತು. ನಾನು ಪರೀಕ್ಷೆಗೆ ಮೂತ್ರದ ಮಾದರಿಯನ್ನು ನೀಡಿದ್ದೇನೆ. ಆದರೆ ನನ್ನ ತಂಡವು ಕಿಟ್ ಪರಿಶೀಲಿಸಿದಾಗ ವಾಯಿದೆ ಮುಗಿದಿದೆ ಎಂಬ ವಿಚಾರ ತಿಳಿದು ಬಂದಿದೆ. ಆದ್ದರಿಂದ ಕಿಟ್‌ನ ವಿಡಿಯೊ ಮಾಡಿ ನಾಡಾಗೆ ಮೇಲ್ ಕಳುಹಿಸಿದ್ದೇವೆ. ಅವರ ತಪ್ಪಿನ ಬಗ್ಗೆ ಮಾಹಿತಿ ನೀಡಿದ್ದೇವೆ. ಆದರೆ ತಪ್ಪು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ ಎಂದು ಹೇಳಿದ್ದಾರೆ. ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಗೆ ನಾವು ಬೆಂಬಲ ನೀಡಿದ್ದರಿಂದ ಸರ್ಕಾರವು ನನ್ನ ಮೇಲೆ ಸೇಡು ತೀರಿಸಲು ಯತ್ನಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ನಾನು ಕಳೆದ 10-12 ವರ್ಷಗಳಿಂದ ಅಖಾಡದಲ್ಲಿದ್ದೇನೆ. ಎಲ್ಲ ಪಂದ್ಯಾವಳಿಗೂ ಮುನ್ನ ಮಾದರಿ ನೀಡುತ್ತಿದ್ದೇನೆ. ಆದರೆ ನಮ್ಮನ್ನು ಒಡೆದು, ಅವರಿಗೆ ತಲೆಬಾಗುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಬಹುದು ಎಂದು ಅವರು ಹೇಳಿದ್ದಾರೆ.

More articles

Latest article