ನವದೆಹಲಿ: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಯಾವುದೇ ತಕರಾರು ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ನ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಾರೆ. ಹಾಗೆಂದು, ಅವರು ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರು ಇಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಂಘ ಪರಿವಾರದವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದವರು. ಈಗಾಗಲೇ ಆರ್ಎಸ್ಎಸ್ ಅನ್ನು ಮೂರು ಬಾರಿ ನಿಷೇಧ ಮಾಡಲಾಗಿದೆ. ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಹುದ್ದೆಯಿಂದ ಸಂಘದ ಪ್ರಾರ್ಥನೆ ಮಾಡಿದರೆ ಅಭ್ಯಂತರವಿಲ್ಲ. ಏಕೆಂದರೆ ಸರ್ಕಾರ ಎನ್ನುವುದು ಸಂಘ ಪರಿವಾರ ಸೇರಿದಂತೆ ಏಳು ಕೋಟಿ ಕನ್ನಡಿಗ ಸರ್ಕಾರ. ಅದರಲ್ಲಿ ಆರ್ ಎಸ್ ಎಸ್ ನವರು, ಜಮಾಅತ್ ಇಸ್ಲಾಮಿ ಸಂಘಟನೆಯವರೂ ಇರುತ್ತಾರೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಒಂದು ವೇಳೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಂತಹ ಪ್ರಾರ್ಥಾನ ಗೀತೆ ಹಾಡುವಂತಿಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹೇಳಿದ್ದರೆ ಅವರು ಕ್ಷಮೆ ಕೇಳಲೇಬೇಕಾಗುತ್ತದೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಲವು ಮುಖಗಳಿವೆ. ಅವರು ಕೃಷಿಕ, ಕ್ವಾರಿ ಮಾಲೀಕ, ಎಜುಕೇಷನಿಸ್ಟ್, ಉದ್ಯಮಿ ಎಂದೆಲ್ಲ ಹೇಳಿಕೊಳ್ಳುತ್ತಾರೆ. ಹೀಗಾಗಿ ಯಾರಿಗೆ ಸಂದೇಶ ಕೊಡಬೇಕು ಎನ್ನುವುದನ್ನು ಅವರು ಗಮನದಲ್ಲಿಟ್ಟುಕೊಂಡಿದ್ದಾರಡಯೋ ತಿಳಿಯದು. ಯಾರನ್ನು ಮೆಚ್ಚಿಸಲು ಹೊರಟಿದ್ದಾರೆ ಎನ್ನುವುದೂ ತಿಳಿದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.