ಅಕ್ರಮ ಗ್ಯಾಸ್ ಸಿಲಿಂಡರ್ ದಾಸ್ತಾನು; ಹುಬ್ಬಳ್ಳಿಯಲ್ಲಿ 25 ಅನಧಿಕೃತ ಅನಿಲ ಸಿಲಿಂಡರ್ ವಶ

ಹುಬ್ಬಳ್ಳಿ: ನಗರದಲ್ಲಿರುವ ಸಿದ್ಧೇಶ್ವರ ಪಾರ್ಕ್‌ನ ಸಮೀಪದ “ಶಿವಸಾಗರ” ಹೋಟೆಲ್‌ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ಸಹಕಾರದೊಂದಿಗೆ ಅಧಿಕಾರಿಗಳು ರವಿವಾರ ತಡರಾತ್ರಿ ದಾಳಿ ನಡೆಸಿದ ವೇಳೆ ಅನಿಲ ತುಂಬಿದ 25 ಸಿಲಿಂಡರ್‌ಗಳು ಪತ್ತೆಯಾಗಿವೆ.

ದಾಳಿಯ ವೇಳೆ ಅಧಿಕಾರಿಗಳು ಸಿಲಿಂಡರ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಆಹಾರ ಇಲಾಖೆ ಅಧಿಕಾರಿಯಾದ ಆಹಾರ ನಿರೀಕ್ಷಕ ವಿಜಯಕುಮಾರ ಪತ್ತಾರ ಅವರು ಹೋಟೆಲ್ ಸಹ ಮಾಲೀಕ ಸುರೇಶ್ ಬಂಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

More articles

Latest article

Most read