ಸಕಲೇಶಪುರ : ಹೇಮಾವತಿ ನದಿ ದಂಡೆ ಸಮೀಪ ಅಕ್ರಮವಾಗಿ ತಡೆಗೋಡೆ ನಿರ್ಮಾಣವಾಗಿರುವ ಆರೋಪದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ತಾಲ್ಲೂಕು ಆಡಳಿತ ತಡೆಗೋಡೆ ತೆರವುಗೊಳಿಸಿದೆ.
ನಗರದ ಶ್ರೀನಿವಾಸ ಕನ್ವೇಷನ್ ಹಾಲ್ ಮಾಲೀಕರಾದ ಶ್ರೀನಿವಾಸ್(ಪಲ್ಲವಿ) ಅವರು ಈ ತಡೆಗೋಡೆ ನಿರ್ಮಿಸಿದ್ದಾರೆ ಎಂದು ಕೆಲ ಸಂಘ ಸಂಸ್ಥೆಗಳ ಮುಖಂಡರು ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜೆಸಿಬಿ ಮೂಲಕ ಉಪ ವಿಭಾಗಧಿಕಾರಿ ಶೃತಿ ಅವರ ಮಾರ್ಗದರ್ಶನದಲ್ಲಿ ಬೃಹತ್ ತಡೆಗೋಡೆಯನ್ನು ತೆರವುಗೊಳಿಸಲಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು.