ಅಕ್ರಮ ಸಂಬಂಧ ಶಂಕೆ: ಪತ್ನಿಯನ್ನು ಕೊಂದ ಗಂಡ

ದಾವಣಗೆರೆ: ಪತ್ನಿ ಅಕ್ರಮ ಸಂಬಂಧ ಹೊಂದಿರಬಹುದು ಎಂಬ ಶಂಕೆ ಹಿನ್ನಲೆಯಲ್ಲಿ ಆಕೆಯ ಗಂಡನೇ ಹತ್ಯೆ ನಡೆಸಿ ತಾನು ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಪತ್ನಿಯನ್ನು ಕೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗೌರಿಪುರದ ಜಿ ನಾಗಮ್ಮ ಸಾವಿಗೀಡಾದ ನತದೃಷ್ಟೆ. ಅವರು ಸಂತೆಮುದ್ದಾಪುರ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿದ್ದರು. ನಿನ್ನೆ ಶಾಲೆಯಿಂದ ಮನೆಗೆ ಬಂದಾಗ ಆಕೆಯ ಪತಿಯೇ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿರುವ ಬಗ್ಗೆ ಬಿಇಓ ಗೆ ಪತ್ರ ಬರೆದಿರುವ ಸತ್ಯಪ್ಪ ನಂತರ ತಾನು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸತ್ಯಪ್ಪನಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿ. ನಾಗಮ್ಮ ಸತ್ಯಪ್ಪ ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದರು. ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ‌ ಶಂಕೆ ಹೊಂದಿದ್ದ ಸತ್ಯಪ್ಪ ಆಗಾಗ ಜಗಳ ತೆಗೆಯುತ್ತಿದ್ದ.

More articles

Latest article

Most read