ಬಿಜೆಪಿಯಲ್ಲಿ ಸಿಎಂ ಹುದ್ದೆಗೆ ದುಡ್ಡು ಕೊಡಬೇಕು ಎಂಬ ಯಡಿಯೂರಪ್ಪ ಮಾತು ನೆನಪಿಸಿಕೊಳ್ಳಿ; ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು @BJP4Karnataka ನಾಯಕರು ಮರೆತಿದ್ದಾರೆಯೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ತಿರುಗೇಟು ನೀಡಿದ್ದಾರೆ.

ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ.

ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ.

ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ವ್ಯಂಗ್ಯವಾಡಿದ್ದಾರೆ.

More articles

Latest article

Most read