ಕೋಲಾರದಲ್ಲಿ ಒಂದೂವರೆ ಗಂಟೆಯಲ್ಲಿ 21 ಜನರನ್ನು ಕಚ್ಚಿ ಗಾಯಗೊಳಿಸಿದ ಬೀದಿನಾಯಿ; ನಗರಸಭೆ ವಿರುದ್ಧ ಜನರ ಆಕ್ರೋಶ

ಕೋಲಾರ: ಕೇವಲ ಒಂದು ರಾಜ್ಯವಲ್ಲ; ಇಡೀ ದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರ ಜತೆಗೆ ಮಿತಿ ಮೀರಿದೆ. ರಾಜ್ಯದ ಕೋಲಾರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದಕ್ಕೆ ಇಲ್ಲೊಂದು ನಿದರ್ಶನವಿದೆ. ಇಲ್ಲಿನ ಒಂದೂವರೆ ಗಂಟೆಯಲ್ಲಿ ಸುಮಾರು 21 ಜನರಿಗೆ ಕಚ್ಚಿ ಗಾಯಗೊಳಿಸಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸ್ಥಳಿಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಬೀದಿನಾಯಿ ನಗರದ ಆರ್​.ಟಿ.ಓ ಆಫೀಸ್​, ಹಳೇ ಹಂಚಿನ ಕಾರ್ಖಾನೆ ಬಡಾವಣೆ, ಬೆತ್ಲಹೆಮ್ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಸಾರ್ವಜನಿಕರ ಮೇಲೆ ಆಕ್ರಮಣಕಾರಿ ದಾಳಿ ನಡೆಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. 21 ಜನರಿಗೆ ಕಚ್ಚಿದ ಈ ನಾಯಿಯನ್ನು ಸಾರ್ವಜನಿಕರೇ ಹೊಡೆದು ಹಾಕುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೀದಿ ನಾಯಿಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ನಗರಸಭೆ ಅಧಿಕಾರಿ ಸಿಬ್ಬಂದಿ ವಿರುದ್ದ ಜನರು ಹರಿಹಾಯ್ದಿದ್ದಾರೆ. ಈಗಲಾದರೂ ನಗರಸಭೆ ಎಚ್ಚೆತ್ತುಕೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ.

More articles

Latest article

Most read