ಬೆಂಗಳೂರು, ಅ. 22 : ಮೈಸೂರು ಅರಮನೆ ಆವರಣದಲ್ಲಿ ನಿನ್ನೆ ನಡೆದ ನಂದಿಧ್ವಜ ಪೂಜೆ ಸಂದರ್ಭದಲ್ಲಿ ಸಚಿವರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ, ಬಸವಂತಪ್ಪ ಅವರನ್ನು ಪೂಜೆ ಆವರಣ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧಿಸಿದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಮಂತ್ರಿಗಳನ್ನೇ ನಿರ್ಬಂಧಿಸುವ ಮೂಲಕ ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿರುವುದು ಕಂಡು ಬಂದಿದೆ. ತಕ್ಷಣ ಖುದ್ದು ನಾನೇ ಮಧ್ಯಪ್ರವೇಶಿಸಿ ಮಂತ್ರಿಗಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇನೆ. ಆದರೂ ಅಧಿಕಾರಿಗಳ ಉಡಾಫೆ ಸಹಿಸಲು ಆಗುವುದಿಲ್ಲ. ಹೀಗಾಗಿ ಇದಕ್ಕೆ ಹೊಣೆಗಾರರು ಯಾರು ಎಂಬ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಅದೇಶಿಸಿದ್ದೇನೆ ಎಂದು ಸಿಎಂ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಕಾರ್ಯದರ್ಶಿಗಳಿಂದ ತನಿಖೆ
ಪೂಜೆ ವೇಳೆ ಸಚಿವರಿಗೆ ಅಡ್ಡಿ ಪಡಿಸಿದ ವಿಚಾರ ಕೇಳಿದಾಗ, “ಇದು ಅಧಿಕಾರಿಗಳ ಅಚಾತುರ್ಯ. ನಂಧಿ ಧ್ವಜಕ್ಕೆ ಪೂಜೆ ಮಾಡಲು ಹೋಗುವಾಗ ಈ ರೀತಿ ಆಗಿದೆ. ನಾನೇ ಸಚಿವರನ್ನು ಬಿಡಿಸಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಪರಿಶೀಲನೆ ಹಾಗೂ ತನಿಖೆ ನಡೆಸುತ್ತಿದ್ದಾರೆ. ಇದೆಲ್ಲ ಹೊರತಾಗಿ ಪೊಲೀಸ್ ಸಿಬ್ಬಂದಿ, ಅಧಿಕಾರಿ ವರ್ಗ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಕೈ ಮುಗಿದು ಧನ್ಯವಾದ ಹೇಳುತ್ತೇನೆ. ವರದಿ ಬಂದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಅವರು ಹೇಳಿದ್ದಾರೆ.

