ಉಪರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಬಿ. ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

Most read

ನವದೆಹಲಿ:  ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ  ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಮುಖಂಡರಾದ ಕೆ.ಸಿ. ವೇಣುಗೋಪಾಲ್,  ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವತ್ ಮತ್ತು ಪ್ರಿಯಾಂಕಾ ಚತುರ್ವೇದಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಅವರೂ ಉಪಸ್ಥಿತರಿದ್ದರು.

ಬಿ. ಸುದರ್ಶನ್ ರೆಡ್ಡಿ ಅವರು ಆಧ್ರಪ್ರದೇಶ ಹೈಕೋರ್ಟ್‌ ನ್ಯಾಯಮೂರ್ತಿ, ಗೌಹಾತಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು 2007ರಿಂದ 2011ರವರೆಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.

More articles

Latest article