ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್

ಹೈದರಾಬಾದ್‌ ನಲ್ಲಿ ಇಂದು ಆರಂಭವಾಗಿರುವ ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ದುಕೊಂಡಿದೆ.

ರಾಜೀವ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಪಿಚ್ ಸ್ಪಿನ್ನರ್ ಗಳಿಗೆ ಅನುಕೂಲಕರವಾಗಿದೆ. ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೂವರು ಸ್ಪಿನ್ನರ್ ಗಳನ್ನು ಕಣಕ್ಕೆ ಇಳಿಸಿರುವುದು ಕ್ರಿಕೆಟ್ ಪಂಡಿತರ ಹುಬ್ಬೇರುವಂತೆ ಮಾಡಿದೆ.

ಭಾರತ ತಂಡದಲ್ಲೂ ನಿರೀಕ್ಷೆಯಂತೆ ಮೂವರು ಸ್ಪಿನ್ನರ್ ಗಳಿದ್ದು ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಮ್ಮ ಕೈಚಳಕ ತೋರಿಸಲು ಕಾದಿದ್ದಾರೆ. ಎಂದಿನಂತೆ ಜಸ್ ಪ್ರೀತ್ ಬೂಮ್ರಾ ಮತ್ತು ಮಹಮದ್ ಸಿರಾಜ್ ವೇಗದ ಬೌಲಿಂಗ್ ಹೊಣೆ ಹೊತ್ತುಕೊಂಡಿದ್ದಾರೆ. ಕೆ.ಎಲ್ ರಾಹುಲ್ ಈ ಪಂದ್ಯದಲ್ಲಿ ಸ್ಪೆಷಲಿಸ್ಟ್ ಬ್ಯಾಟ್ಸ್ ಮನ್ ಆಗಿ ತಮ್ಮ ಹಿಂದಿನ ಜವಾಬ್ದಾರಿಗೆ ವಾಪಾಸಾಗಿದ್ದು, ಶ್ರೀಕರ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ 27 ರನ್ ಗಳಿಸಿದೆ

More articles

Latest article

Most read