ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿದ್ದು, ಸದ್ಯದ ಪರಿಸ್ಥಿತಿಗೆ ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಪ್ರತಿಕ್ರಿಯೆ ನೀಡಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಫೋನ್ ಸಂಭಾಷಣೆ ನಡೆಸಿದ ನಂತರ ಜೈಶಂಕರ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇಂದು ಬೆಳಿಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸಂಭಾಷಣೆ ನಡೆಸಿದ್ದೇನೆ. ಭಾರತವು ಸದ್ಯದ ಪರಿಸ್ಥಿತಿಗೆ ಶಾಂತ, ಚಿಂತನಶೀಲ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದೆ.
ಗೆಯೇ ಮುಂದುವರಿಯುತ್ತದೆ ಎಂದು ಜೈಶಂಕರ್ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಭಾರತ ಮತ್ತು ಪಾಕಿಸ್ತಾನ ಎರಡೂ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಪರಸ್ಪರ ನೇರ ಮಾತುಕತೆಯನ್ನು ಪುನರಾರಂಭಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ್ದಾರೆ ಎಂದು ಅಮೆರಿಕ ತಿಳಿಸಿದೆ.