ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಮೈತ್ರಿಕೂಟದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾಹಿತಿ ಈಗ ಹೊರ ಬಿದಿದ್ದು ಮಾಧ್ಯಮಗಳು ವರದಿ ಮಾಡಿದೆ.
28 ವಿರೋಧ ಪಕ್ಷಗಳ ಭಾರತ ಮೈತ್ರಿಕೂಟವು ಶನಿವಾರ ವರ್ಚುವಲ್ ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.
ಇತ್ತೀಚೆಗಷ್ಟೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ಸೂಚಿಸಿದ್ದವು.