ಕದನ ವಿರಾಮಕ್ಕೆ ತಾನು ಕಾರಣ ಎಂಬ ಅಮೆರಿಕ ಹೇಳಿಕೆ ಸುಳ್ಳೇ?; ಕಾಂಗ್ರೆಸ್‌ ಮುಖಂಡ ಸಚಿನ್‌ ಪೈಲಟ್‌ ಪ್ರಶ್ನೆ

ಜೈಪುರ: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು  ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್‌ ಗಂಭೀರ ಆರೋಪ ಮಾಡಿದ್ದಾರೆ.

ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಟೀಕಿಸಿರುವ ಅವರು, ಬಿಜೆಪಿಯಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ. ಆಡಳಿತ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಪುರಸಭೆಗಳ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ ನಿರ್ಧರಿಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಭಾರತ  ಪಾಕಿಸ್ತಾನ ಸಂಘರ್ಷದ ಕುರಿತೂ ಮಾತನಾಡಿರುವ ಪೈಲಟ್‌, ಮೂರನೇ ವ್ಯಕ್ತಿಯಾದ ಅಮೆರಿಕ ಅಧ್ಯಕ್ಷರು ಕದನ ವಿರಾಮವನ್ನು ಘೋಷಿಸಿರುವುದು ಅನಿರೀಕ್ಷಿತವಾಗಿತ್ತು. ಕದನ ವಿರಾಮ ಘೋಷಣೆಯಲ್ಲಿ ತಮ್ಮ ಪಾತ್ರವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪದೇ ಪದೇ ಹೇಳುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಲ್ಲಗಳೆದಿಲ್ಲ. ಇದು ಅಮೆರಿಕದ ಹೇಳಿಕೆಯನ್ನು ಸಮರ್ಥಿಸಿದಂತಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರವನ್ನು ಶ್ಲಾಘಿಸಿದ ಪೈಲಟ್‌, ಸಂಘರ್ಷದ ವೇಳೆ ಮಡಿದವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

More articles

Latest article

Most read