ನವದೆಹಲಿ: ಇಂದು ಸಂಜೆ 5 ಗಂಟೆಯಿಂದಲೇ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಇಂದು ಮಧ್ಯಾಹ್ನ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಭಾರತ ಡಿಜಿಎಂಒ ಅವರೊಂದಿಗೆ ಮಾತುಕತೆ ನಡೆಸಿದ್ದು, ಭಾರತೀಯ ಕಾಲಮಾನ 5 ಗಂಟೆಯಿಂದ ಜಾರಿಗೆ ಬರುವಂತೆ ಭೂ, ವಾಯು ಮತ್ತು ನೌಕಾದಳದ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೂಲಕ ಎರಡು ದೇಶಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಉಭಯ ದೇಶಗಳ ಡಿಜಿಎಂಒಗಳು ಮೇ 12ರಂದು ಮಧ್ಯಾಹ್ನ 12 ಗಂಟಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.