ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪರೋಕ್ಷ ಯುದ್ಧವೇ ನಡೆಯುತ್ತಿದೆ. ಉಭಯ ದೇಶಗಳ ನಡುವೆ ಅಮೆರಿಕ ಸಮಧಾನ ನಡೆಸಿದೆ. ಭಾರತ ಪಾಕಿಸ್ತಾನವನ್ನು ಶಾಂತಗೊಳಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ನಡೆದ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಸಂಪೂರ್ಣವಾಗಿ ಕದನ ವಿರಾಮ ಘೋಷಣೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ವಿಷಯವನ್ನು ಸ್ವತಃ ಅಮೆರಿಕ ಅಧ್ಯಕ್ಷರೇ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.