ದಾವಣಗೆರೆ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.
ಸದ್ಯ ಭಾರತ,ಪಾಕಿಸ್ತಾನ ಮಧ್ಯೆ ಯುದ್ದದ ಭೀತಿ ಸೃಷ್ಟಿಯಾಗಿದೆ. ಹಾಗಾಗಿ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ನಮ್ಮ ಜಿಲ್ಲೆಯಲ್ಲೂ ಕೂಡ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮ. ಜನ ಆತಂಕಕ್ಕೆ ಒಳಗಾಗದ ರೀತಿ ಪೊಲೀಸರು ತಿಳವಳಿಕೆ ನೀಡಬೇಕು. ದಾವಣಗೆರೆ ಜಿಲ್ಲೆಯಾದ್ಯಂತ ಅಗತ್ಯ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಜಾಲತಾಣಗಳಲ್ಲಿ ಅನುಮಾನಾಸ್ಪದ ಸುದ್ದಿಗಳು, ಸುಳ್ಳು ಸುದ್ದಿಗಳು, ಪ್ರಚೋದನಾತ್ಮಕ ಪೋಸ್ಟ್, ದ್ವೇಷ ಭಾಷಣಗಳು ಕಂಡುಬಂದರೆ. 9480803208 ವಾಟ್ಸಾಪ್ ನಂಬರ್ ಗೆ ಮಾಹಿತಿ ನೀಡಬಹುದು. ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.