ಭಾರತ–ಪಾಕ್‌ ಬಿಕ್ಕಟ್ಟು, ದೇಶದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಿಲ್ಲ: ಆರ್‌ ಬಿಐ ಗವರ್ನರ್‌ ಸಂಜಯ್‌ ಮಲ್ಹೋತ್ರಾ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಗವರ್ನರ್‌ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.

ಉಭಯ ದೇಶಗಳ ನಡುವಿನ ಸಂಘರ್ಷವು ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮವನ್ನೇನೂ ಉಂಟು ಮಾಡಿಲ್ಲ. ಅತಿ ಕಡಿಮೆ ಪ್ರಮಾಣದ ಪರಿಣಾಮವನ್ನಷ್ಟೇ ಉಂಟುಮಾಡಿದೆ. ಉತ್ತರ ಭಾರತದ ಹಲವೆಡೆ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದು ಕೆಲವು ದಿನಗಳ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿತ್ತು. ನಂತರ ಪರಿಸ್ಥಿತಿ ಸಹಜ ಸ್ಥತಿಗೆ ಮರಳಿದ್ದು, ಯಾವುದೇ ದೊಡ್ಡ ಪ್ರಮಾಣದ ನಷ್ಟವಾಗಿಲ್ಲ ಎಂದು ತಿಳಿಸಿದ್ದಾರೆ.

ಸಂಘರ್ಷದ ತೀವ್ರತೆ ಹೆಚ್ಚಿದ್ದ ಕೆಲವು ದಿನಗಳ ಮಟ್ಟಿಗೆ ಕೆಲವು ಪ್ರದೇಶಗಳಲ್ಲಿ ಬೆಲೆ ಏರಿಕೆಯಾಗಿತ್ತು. ಇದೀಗ ಪರಿಸ್ಥಿತಿ ಮತ್ತೆ ಮೊದಲಿನಂತಾಗಿದ್ದು, ದೇಶದ ಆರ್ಥಿಕತೆಯ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರಲಿಲ್ಲ. ಕೋವಿಡ್‌ –19 ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೋವಿಡ್‌ ಈಗ ಕೇವಲ ಒಂದು ವೈರಾಣುವಷ್ಟೇ. ಅದು ಹಾಗೆ ಇರುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದರು.

ಏಪ್ರಿಲ್‌ 22ರಂದು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದ ಸೇನಾಪಡೆಗಳು ‘ಅಪರೇಷನ್ ಸಿಂಧೂರ’ ಮೂಲಕ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತ್ತು.

More articles

Latest article

Most read