ಭಾರತ vs ದಕ್ಷಿಣ ಆಫ್ರಿಕಾ ಮಹಿಳಾ ಟಿ20 ಸರಣಿ ಇಂದಿನಿಂದ ಆರಂಭ

ಬೆಂಗಳೂರು ಏ.17 : ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಸುಮಾರು ಒಂದು ತಿಂಗಳ ಬಿಡುವಿನ ನಂತರ ಮತ್ತೆ ಮೈದಾನಕ್ಕೆ ಇಳಿಯಲು ಸಜ್ಜಾಗಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ, ಶುಕ್ರವಾರ (ಏಪ್ರಿಲ್ 17) ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಹಣಾಹಣಿಯಲ್ಲಿ ಸೆಣಸಲಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ 2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಅಂದು ದಕ್ಷಿಣ ಆಫ್ರಿಕಾವನ್ನು ಮಣಿಸಿ ಭಾರತ ಮೊದಲ ಬಾರಿಗೆ ಐಸಿಸಿ ಟ್ರೋಫಿ ಗೆದ್ದು ಇತಿಹಾಸ ಬರೆದಿತ್ತು. ಆ ರೋಚಕ ಫೈನಲ್ ಬಳಿಕ ಉಭಯ ತಂಡಗಳು ಮೊದಲ ಬಾರಿಗೆ ಪರಸ್ಪರ ಎದುರಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿರುವ 2026ರ ಮಹಿಳಾ ಟಿ20 ವಿಶ್ವಕಪ್‌ಗೆ ಮುನ್ನ ಭಾರತಕ್ಕೆ ಇದು ಅತ್ಯಂತ ಪ್ರಮುಖ ಸರಣಿಯಾಗಿದೆ. ಶ್ರೀಲಂಕಾ ವಿರುದ್ಧ 5-0 ಮತ್ತು ಪ್ರಬಲ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಲ್ಲಿ ಸರಣಿ ಜಯಿಸಿ ಭರ್ಜರಿ ಫಾರ್ಮ್‌ನಲ್ಲಿರುವ ಭಾರತಕ್ಕೆ, ಈ ಸರಣಿಯು ವಿಶ್ವಕಪ್ ಸಿದ್ಧತೆಯ ‘ರಿಯಾಲಿಟಿ ಚೆಕ್’ ಆಗಲಿದೆ.

​ದಕ್ಷಿಣ ಆಫ್ರಿಕಾ ತಂಡವು ಕಳೆದ 2023 ಮತ್ತು 2024ರ ಟಿ20 ವಿಶ್ವಕಪ್‌ಗಳಲ್ಲಿ ಸತತವಾಗಿ ಫೈನಲ್ ತಲುಪಿದ ಅನುಭವ ಹೊಂದಿದೆ. ಹೀಗಾಗಿ, ಡರ್ಬನ್‌ನ ವೇಗದ ಪಿಚ್‌ನಲ್ಲಿ ಹರ್ಮನ್‌ಪ್ರೀತ್ ಪಡೆಗೆ ‘ಪ್ರೋಟೀಸ್’ ಪಡೆ ಕಠಿಣ ಸವಾಲು ನೀಡುವುದು ಖಚಿತ. ಮೊದಲ ಎರಡು ಪಂದ್ಯಗಳು ಡರ್ಬನ್‌ನಲ್ಲಿ ನಡೆದರೆ, ಉಳಿದ ಪಂದ್ಯಗಳು ಜೋಹಾನ್ಸ್‌ಬರ್ಗ್ ಮತ್ತು ಬೆನೋನಿಯಲ್ಲಿ ನಡೆಯಲಿವೆ.

More articles

Latest article

Most read