ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ; ಗಡುವು ವಿಸ್ತರಣೆ

Most read

ಬೆಂಗಳೂರು: ವಾಹನಗಳಿಗೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದ್ದರೂ ವಾಹನಗಳ ಮಾಲೀಕರು ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಆಸಕ್ತಿ ತೋರುತ್ತಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಇದೀಗ ಜನವರಿ 31ರವರೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಣಿಯಾಗಿರುವ 2 ಕೋಟಿ ವಾಹನಗಳಲ್ಲಿ ಕೇವಲ 55 ಲಕ್ಷ ವಾಹನಗಳು ಮಾತ್ರ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಸಿಕೊಂಡಿವೆ. ಇನ್ನೂ 1.45 ಕೋಟಿ ವಾಹನಗಳು ಎಚ್ ಎಸ್ ಆರ್ ಪಿ ಫಲಕವನ್ನು ಅಳವಡಿಸಿಕೊಳ್ಳಬೇಕಿವೆ. ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಎಚ್ಎಸ್ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

More articles

Latest article