ಅಂಬೇಡ್ಕರ್‌ ಕುರಿತು ಅಮಿತ್‌ ಶಾ ಅವಹೇಳನ; ಮೈಸೂರು, ಮಂಡ್ಯದಲ್ಲಿ ಪ್ರತಿಭಟನೆ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಇಂದು ಮೈಸೂರು ಮತ್ತು ಮಂಡ್ಯ ಬಂದ್‌ ಗೆ ಕರೆ ನೀಡಲಾಗಿದೆ.  ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ, ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ದಲಿತ, ರೈತ ಮತ್ತು ಪ್ರಗತಿಪರ ಸಂಘಟನೆಗಳು ಬಂದ್‌ ಗೆ ಕರೆ ನೀಡಿವೆ. ಪ್ರತಿಭಟನಾಕಾರರು ಗ್ರಾಮಾಂತರ ಬಸ್‌ ನಿಲ್ದಾಣದಲ್ಲಿ ಬಸ್‌ ಗಳನ್ನು ತಡೆದು ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸ್‌ ನಿಲ್ದಾಣದ ಮುಂಬಾಗದಲ್ಲಿ ಕುಳಿತು ಘೋಷಣೆಗಳನ್ನು ಕೂಗಿದರು. ನಂತರ ಪ್ರಮು ರಸ್ತೆಗಳಲ್ಲಿ ಅಮಿತ್‌ ಶಾ ಪ್ರತಿಕೃತಿಯ ಮೆರವಣಿಗೆ ನಡೆಸಿದರು. ಪೊಲೀಸರ ವಿರೋಧದ ನಡುವೆಯೂ ಪ್ರತಿಭಟನಾಕಾರರು ಅಮಿತ್‌ ಶಾ ಅವರ ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಲ್ಲಲ್ಲಿ ವಾಹನಗಳನ್ನು ತಡೆದು ಕಿಡಿ ಕಾರಿದರು.

ಇತ್ತ ಮಂಡ್ಯ ನಗರದಲ್ಲೂ ದಲಿತ ಸಂಘಟನೆಗಳು ಬಂದ್‌ಗೆ ಕರೆ ಕೊಡಲಾಗಿದೆ. ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬಂದ್‌ ಗೆ ದಲಿತ,‌ ರೈತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಬೆಂಬಲ ಸೂಚಿಸಿವೆ. ಮೈಸೂರು ಮಂಡ್ಯ ನಗರಗಳಲ್ಲಿ ಬಂದ್‌ ಗೆ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

More articles

Latest article

Most read