ಹೋಟೆಲ್‌ ಪ್ರದರ್ಶನ ಫಲಕದಲ್ಲಿ ಕನ್ನಡಿಗರ ಅವಹೇಳನ; ದೂರು ದಾಖಲು

Most read

ಬೆಂಗಳೂರು: ಕನ್ನಡಿಗರ ವಿರುದ್ಧ ಪ್ರದರ್ಶನ ಫಲಕದಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದ  ಹೋಟೆಲ್ ಮಾಲೀಕರ ವಿರುದ್ಧ ಮಡಿವಾಳ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಶುಕ್ರವಾರ ರಾತ್ರಿ ಈ ಆಕ್ಷೇಪಾರ್ಹ ಬರಹ ಬಹಿರಂಗಗೊಂಡಿದೆ. ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ನಂತರ ಈ  ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಪೊಲೀಸರು ಪ್ರದರ್ಶನ ಫಲಕದಲ್ಲಿದ್ದ ಬರಹವನ್ನು ತೆಗೆಸಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಎಸ್ ಸೂಟ್‌ ಗಳನ್ನು ನಡೆಸುತ್ತಿದ್ದ ಹೋಟೆಲ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ. ಅಲ್ಲಿ ಕೆಲಸ ಮಾಡುತ್ತಿರುವ ಐವರು ಸಿಬ್ಬಂದಿಯನ್ನು ಪ್ರಶ್ನಿಸಲಾಗಿದೆ. ಜಿಎಸ್ ಸೂಟ್‌ ಮಾಲೀಕರು ವಿದೇಶದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ನೀಡಲಾಗುತ್ತದೆ ಮತ್ತು ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

More articles

Latest article