ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಮಾತನಾಡಿ, ಬಜೆಟ್ ನಲ್ಲಿ 2 ನಿರ್ಣಯ ತೆಗೆದುಕೊಳ್ಳಲಾಗಿದೆ. ದೇಶದ ಅಭಿವೃದ್ದಿಗೆ ನಾಲ್ಕು ಸ್ತಂಭಗಳಾದ ಯುವಕರು, ಮಹಿಳೆಯರು, ರೈತರು ಹಾಗೂ ಬಡವರು ಸಬಲೀಕರಣ ಮಾಡಲು ಬಿಜೆಟ್ ಇದಾಗಿದೆ. ಹೊಸ ಉದ್ಯೋಗ ಸೃಷ್ಟಿಗೆ ಒತ್ತು ನೀಡಿದ್ದು, ದೇಶದ ಭವಿಷ್ಯವನ್ನು ನಿರ್ಮಿಸುವ ಬಜೆಟ್. ಮಂಡಿಸಲಾಗಿದೆ ಎಂದು ಹೇಳಿದ್ದಾರೆ.
ಈ ಬಜೆಟ್ 2047ರ ವಿಕಸಿತ ಭಾರತಕ್ಕೆ ಪೂರಕವಾದ ಬಜೆಟ್ ಆಗಿದೆ. ಸಮಾಜದ ಪ್ರತಿ ಕ್ಷೇತ್ರಗಳಿಗೆ ಈ ಬಜೆಟ್ ತಲುಪಿದೆ. ಬಜೆಟ್‌ನಲ್ಲಿ 40 ಸಾವಿರ ವಂದೇ ಭಾರತ್ ಆಧುನಿಕ ಬೋಗಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಬಡವರಿಗೆ ಈಗಾಗಲೇ 3 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ಇದೀಗ ಮತ್ತೆರೆಡು ಕೋಟಿ ಮನೆ ನಿರ್ಮಾಣ ಮಾಡುತ್ತಿದ್ದೇವೆ. ಲಕ್ ಪತಿ ದೀದಿಯಲ್ಲಿ ಮತ್ತೆ 3 ಕೋಟಿ ಮಹಿಳೆಯರು ಯೋಜನೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅಂಗನವಾಡಿ ಆಶಾ ಕಾರ್ಯಕರ್ತರೆಗಿ ಆಯುಷ್ಮಾನ್ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಸಂಶೋಧನೆ ಮತ್ತು ನಾವೀನ್ಯತೆಗೆ 1 ಲಕ್ಷ ಕೋಟಿ ರೂಪಾಯಿ ಬಂಡವಾಳ ತೆಗೆದಿಡಲಾಗಿದೆ. ಸ್ಟಾರ್ಟ್ ಅಪ್ ಕ್ಷೇತ್ರದಲ್ಲಿ ಮತ್ತಷ್ಟು ಹೂಡಿಕೆಗೆ ವಿಪುಲ ಅವಕಾಶ ಮಾಡಿಕೊಡಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಕೊರತೆ ಬಜೆಟ್ ನಿಯಂತ್ರಣ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಹಾಗೂ ತಂಡಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.