Saturday, July 27, 2024

ಈ ಬಜೆಟ್ 2047ರ ವಿಕಸಿತ ಭಾರತಕ್ಕೆ ಪೂರಕವಾದ ಬಜೆಟ್ : ಪ್ರಧಾನಿ ನರೇಂದ್ರ ಮೋದಿ

Most read

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಕುರಿತು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಮಾತನಾಡಿ,  ಬಜೆಟ್‌ ನಲ್ಲಿ 2 ನಿರ್ಣಯ ತೆಗೆದುಕೊಳ್ಳಲಾಗಿದೆ. ದೇಶದ ಅಭಿವೃದ್ದಿಗೆ ನಾಲ್ಕು ಸ್ತಂಭಗಳಾದ ಯುವಕರು, ಮಹಿಳೆಯರು, ರೈತರು ಹಾಗೂ ಬಡವರು ಸಬಲೀಕರಣ ಮಾಡಲು ಬಿಜೆಟ್ ಇದಾಗಿದೆ. ಹೊಸ ಉದ್ಯೋಗ ಸೃಷ್ಟಿಗೆ ಒತ್ತು ನೀಡಿದ್ದು, ದೇಶದ ಭವಿಷ್ಯವನ್ನು ನಿರ್ಮಿಸುವ ಬಜೆಟ್. ಮಂಡಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಜೆಟ್ 2047ರ ವಿಕಸಿತ ಭಾರತಕ್ಕೆ ಪೂರಕವಾದ ಬಜೆಟ್ ಆಗಿದೆ. ಸಮಾಜದ ಪ್ರತಿ ಕ್ಷೇತ್ರಗಳಿಗೆ ಈ ಬಜೆಟ್‌ ತಲುಪಿದೆ. ಬಜೆಟ್‌ನಲ್ಲಿ 40 ಸಾವಿರ ವಂದೇ ಭಾರತ್ ಆಧುನಿಕ ಬೋಗಿಯನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಬಡವರಿಗೆ ಈಗಾಗಲೇ 3 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ಇದೀಗ ಮತ್ತೆರೆಡು ಕೋಟಿ ಮನೆ ನಿರ್ಮಾಣ ಮಾಡುತ್ತಿದ್ದೇವೆ. ಲಕ್ ಪತಿ ದೀದಿಯಲ್ಲಿ ಮತ್ತೆ 3 ಕೋಟಿ ಮಹಿಳೆಯರು ಯೋಜನೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅಂಗನವಾಡಿ ಆಶಾ ಕಾರ್ಯಕರ್ತರೆಗಿ ಆಯುಷ್ಮಾನ್ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. 

ಸಂಶೋಧನೆ ಮತ್ತು ನಾವೀನ್ಯತೆಗೆ 1 ಲಕ್ಷ ಕೋಟಿ ರೂಪಾಯಿ ಬಂಡವಾಳ ತೆಗೆದಿಡಲಾಗಿದೆ. ಸ್ಟಾರ್ಟ್ ಅಪ್ ಕ್ಷೇತ್ರದಲ್ಲಿ ಮತ್ತಷ್ಟು ಹೂಡಿಕೆಗೆ ವಿಪುಲ ಅವಕಾಶ ಮಾಡಿಕೊಡಲಾಗಿದೆ ಎಂದು ಮೋದಿ ಹೇಳಿದ್ದಾರೆ. 

ಕೊರತೆ ಬಜೆಟ್‌ ನಿಯಂತ್ರಣ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್‌  ಹಾಗೂ ತಂಡಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

More articles

Latest article