ಒಳ ಮೀಸಲಾತಿ: ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್ ಆಯೋಗ

Most read

ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಲಾಯಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಪ್ರಾತಿನಿಧ್ಯತೆ ಕಲ್ಪಿಸುವ ಸಂಬಂಧ ಪ್ರಾಯೋಗಿಕ ಅಂಕಿ ಅಂಶ (ಎಂಫರಿಕಲ್ ಡಾಟಾ) ಪಡೆದು ಒಳಮೀಸಲಾತಿ ಜಾರಿಗೆ ಸೂಕ್ತ ಶಿಫಾರಸು ಮಾಡುವಂತೆ 14 ನವೆಂಬರ್ 2024ರಂದು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಎರಡು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಬಳಿಕ ಅವಧಿಯನ್ನು ವಿಸ್ತರಿಸಲಾಗಿತ್ತು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More articles

Latest article