ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ Vs ಪಂಜಾಬ್ ಪಂದ್ಯ​: ಪೊಲೀಸರಿಂದ ಬಿಗಿಬಂದೋಬಸ್ತ್

Most read

ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ‌. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.

ಆರ್​ಸಿಬಿ ಪಂದ್ಯ ಬೆಂಗಳೂರಲ್ಲೇ ನಡೆಯುವುದರಿಂದ ಕ್ರೀಡಾಂಗಣಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ಬರಲಿದ್ದಾರೆ. ಹೀಗಾಗಿ ಬಂದೋಬಸ್ತ್​ಗಾಗಿಯೇ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಈಗಾಗಲೇ ಬಾಂಬ್ ನಿಷ್ಕ್ರಿಯದಳ ಹಾಗೂ ಶ್ವಾನದಳ ಸಂಪೂರ್ಣವಾಗಿ ತಪಾಸಣೆ ನಡೆಸಿವೆ.

More articles

Latest article