ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಂದು ಪ್ರಾರಂಭವಾಗಲಿದೆ. ಸಾರ್ವತ್ರಿಕ ಚುನಾವಣೆಗಳ ಹೊರತಾಗಿಯೂ ಸಂಪೂರ್ಣವಾಗಿ ದೇಶದಲ್ಲಿ IPL ನಡೆಯಲಿದೆ ಎಂದು ಲೀಗ್ ಅಧ್ಯಕ್ಷ ಅರುಣ್ ಧುಮಾಲ್ ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ ಧುಮಾಲ್, ಮೊದಲಿಗೆ, ಮೊದಲ 15 ದಿನಗಳ ವೇಳಾಪಟ್ಟಿಯನ್ನು ಮಾತ್ರ ಘೋಷಿಸಲಾಗುವುದು. ಉಳಿದ ಪಂದ್ಯಗಳ ರೋಸ್ಟರ್ ಅನ್ನು ಸಾರ್ವತ್ರಿಕ ಚುನಾವಣಾ ದಿನಾಂಕಗಳ ಘೋಷಣೆಯ ನಂತರ ನಿರ್ಧರಿಸಲಾಗುವುದು ಎಂದು ಹೇಳಿದರು.
ನಾವು ಮಾರ್ಚ್ 22ರಂದು ಟೂರ್ನಿಯ ಆರಂಭಿಸಲು ನಿರ್ಧರಿಸಿದ್ದೇವೆ. ಈ ಕುರಿತು ಸರ್ಕಾರಿ ಸಂಸ್ಥೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಮೊದಲು ಆರಂಭಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ ನಂತರ ಚುನಾವಣೆ ದಿನಾಂಕ ಘೋಷಣೆ ಬಳಿಕ ಮತ್ತೆ ಇನ್ನೊಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಇಡೀ ಪಂದ್ಯಾವಳಿ ಭಾರತದಲ್ಲಿ ನಡೆಯಲಿದೆ, “ಎಂದು ಧುಮಾಲ್ ಹೇಳಿದರು.
ಈಗಾಗಲೇ ಚುನಾವಣೆ ಪ್ರಕ್ರಿಯೆಯನ್ನು ಏಪ್ರಿಲ್ 26 ರಂದು ಶುರು ಮಾಡಿಕೊಳ್ಳಬೇಕು ಎಂದು ಚುನಾವಣೆ ಆಯೋಗ ಆದೇಶ ಹೊರಡಿಸಿದೆ. ಮೇ ತಿಂಗಳಲ್ಲಿ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ.