ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯಗಳು ಫಿಕ್ಸ್:‌ ವೆಂಕಟೇಶ್‌ ಪ್ರಸಾದ್‌ ವಿಶ್ವಾಸ

Most read

ಮೈಸೂರು: ಕ್ರಿಕೆಟ್‌ ಅಭಿಮಾಣಿಗಳಿಗೆ ಗುಡ್‌ ನ್ಯೂಸ್!‌ ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಯುತ್ತಿದೆ. ಬಿಸಿಸಿಐ ಕೂಡಾ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನಾ ಪಂದ್ಯ ನಡೆಸಲು ಉತ್ಸುಕವಾಗಿದೆ ಎಂದು ತಿಳಿದು ಬಂದಿದೆ ಎಂದು ಹೇಳಿದರು.

ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್‌ ನಲ್ಲೇ ಉದ್ಘಾಟನಾ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅವಘಡಗಳು ಸಂಭವಿಸಿದ್ದರಿಂದ ಗೊಂದಲಗಳು ಉಂಟಾಗಿದ್ದವು. ನಮ್ಮ ತಂಡ ಕೆ ಎಸ್‌ ಸಿಎ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ರಾಜ್ಯದ ಸಿಎಂ ಡಿಸಿಎಂ ಜತೆ ಮಾತುಕತೆ ನಡೆಸಿದ್ದೇವೆ. ಸರ್ಕಾರವೂ ಒಪ್ಪಿಗೆ ಸೂಚಿಸಿದೆ. ಗೃಹ ಸಚಿವರ ಜತೆಯೂ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.  

ಆದಷ್ಟೂ ಬೇಗನೆ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದ್ದು, ಬೆಂಗಳೂರಿನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತವೆ ಎಂದು ವೆಂಕಟೇಶ್‌ ಪ್ರಸಾದ್‌ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಕುರಿತುಚರ್ಚೆ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಇಲ್ಲಿನ ಕ್ಲಬ್‌ ನಲ್ಲಿ ಸಾಕಷ್ಟು ಗೊಂದಗಳು ಉಂಟಾಗಿದ್ದವು. ಈ ಗೊಂದಲಗಳನ್ನು ನಮ್ಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೇವೆ ಎಂದು ತಿಳಿಸಿದರು.

More articles

Latest article