ಕರ್ನಾಟಕ ವಾರ್ತಾ ಇಲಾಖೆ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತೆ ನೇಮಕ

ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ.

ಲೋಕಸಭೆ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ಹೇಮಂತ್‌ ನಿಂಬಾಳ್ಕರ್‌ ಅವರು ಮೂರು ತಿಂಗಳಿನಿಂದಲೂ ಯಾವುದೇ ಹುದ್ದೆಯಲ್ಲಿ ಇರಲಿಲ್ಲ. ಈವರೆಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರೆಸಲಾಗಿದ್ದು, ಹೇಮಂತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಡಾ. ಅಂಜಲಿ ನಿಂಬಾಳ್ಕರ್‌ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ ಅವರನ್ನು ವರ್ಗ ಮಾಡಲಾಗಿತ್ತು. ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು. ಈಗ ಅವರನ್ನು ಮತ್ತೆ ವಾರ್ತಾ ಇಲಾಖೆಯ ಆಯುಕ್ತರಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ ಅವರು ಜನವರಿಯಲ್ಲಿ ಬಡ್ತಿ ಹೊಂದಿದ್ದರು. ಅವರಿಗೆ ಐಜಿಪಿ ದರ್ಜೆಯಿಂದ ಎಡಿಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿತ್ತು.

More articles

Latest article

Most read