ಟ್ರಂಪ್ ಕದನ ವಿರಾಮ ಘೋಷಣೆ ನಡುವೆಯೂ ಯುದ್ಧ ಮುಂದುವರೆಸಿದ ಇರಾನ್ ಇಸ್ರೇಲ್‌

Most read

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇರಾನ್‌ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಕದನ ವಿರಾಮಕ್ಕೆ ಕತಾರ್ ಮಧ್ಯಸ್ಥಿಕೆ ವಹಿಸಿತ್ತು ಎಂದು ತಿಳಿದು ಬಂದಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಇರಾನ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಕೂಡಲೇ  ಟ್ರಂಪ್‌ ಈ ಘೋಷಣೆ ಮಾಡಿದ್ದಾರೆ.

ಆದರೆ ಇರಾನ್‌ ಟ್ರಂಪ್ ಅವರ ಹೇಳಿಕೆಯನ್ನು ನಿರಾಕರಿಸಿದ್ದು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ತಿಳಿಸಿದೆ.

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಎಕ್ಸ್‌  ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ದೇಶದ ಮೇಲೆ ಮೊದಲು ಯುದ್ಧ ಆರಂಭಿಸಿದ್ದು ಇಸ್ರೇಲ್. ಈ ಕ್ಷಣದವರೆಗೆ ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಒಪ್ಪಂದ ಆಗಿಲ್ಲ. ಇಸ್ರೇಲ್ ಕಾನೂನುಬಾಹಿರ ಆಕ್ರಮಣವನ್ನು ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವುದನ್ನು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಇಂದು ಮುಂಜಾನೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್ ಮತ್ತು ಇರಾನ್ ರಾಷ್ಟ್ರಗಳ ನಡುವ ಸಂಪೂರ್ಣ ಕದನ ವಿರಾಮ ಒಪ್ಪಂದವಾಗಿದೆ ಎಂದು ಘೋಷಿಸಿದ್ದರು.

ಶ್ವೇತಭವನದ ಮೂಲಗಳ ಪ್ರಕಾರ ಕದನ ವಿರಾಮ ಏರ್ಪಟ್ಟಿದೆ. ಕತಾರ್‌ನ ಅಮೀರ್ ಶೇಖ್ ತಮೀಮ್ ಬಿಬ್ ಹಮದ್ ಅಲ್ ಥಾನಿ ಅವರು ಕದಾನ ವಿರಾಮ ಮಾತುಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಅಮೆರಿಕ ತಿಳಿಸಿದೆ.  

ಕದನ ವಿರಾಮ ಕುರಿತು ಟ್ರಂಪ್ ಘೋಷಣೆ ಮಾಡಿದ್ದರೂ ಇಸ್ರೇಲ್‌ ನಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.  ಟ್ರಂಪ್  ಕದನ ವಿರಾಮ ಘೋಷಿಸಿದ ಮೂರು ಗಂಟೆಯೊಳಗೆ ಇರಾನ್ ಮತ್ತೆ ಇಸ್ರೇಲ್ ಸಾಳಿ ಪ್ರತಿದಾಳಿ ನಡೆಸಿವೆ. ಇದರಿಂದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿವೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ.

More articles

Latest article