174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಅತ್ಯುನ್ನತ ನಾಗರಿಕ ಶೌರ್ಯ ಪ್ರಶಸ್ತಿ

ಟೆಲ್ ಅವೀವ್ ಅ. 9 : ಪ್ರಯಾಣಿಕರ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್ ಸರ್ಕಾರ ನಾಗರಿಕ ಶೌರ್ಯ ಪ್ರಶಸ್ತಿ ಘೋಷಿಸಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ಈ ಗೌರವವನ್ನು ಪ್ರಕಟಿಸಿದ್ದು, ಸ್ಮಿತ್ ಚೇತರಿಸಿಕೊಂಡ ಬಳಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಈ ಘಟನೆ ನಡೆದಿತ್ತು. ವಿಮಾನದ ಸಹಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಮೇಲೆ ಹಲ್ಲೆ ನಡೆಸಿದ್ದರಿಂದ ವಿಮಾನ ಅಪಾಯಕ್ಕೆ ಸಿಲುಕಿತ್ತು. ತೀವ್ರವಾಗಿ ಗಾಯಗೊಂಡಿದ್ದರೂ ಸ್ಮಿತ್ ಕಾಕ್‌ಪಿಟ್ ಬಾಗಿಲು ತೆರೆಯುವಲ್ಲಿ ಯಶಸ್ವಿಯಾಗಿದ್ದರು. ಇದರಿಂದ ಒಳನುಗ್ಗಿದ ಪ್ರಯಾಣಿಕರು ಮತ್ತು ಸಿಬ್ಬಂದಿ ಹಲ್ಲೆ ನಡೆಸಿದ ಸಹಪೈಲಟ್‌ನನ್ನು ನಿಯಂತ್ರಿಸಲು ಸಾಧ್ಯವಾಯಿತು. ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬೂಕ್‌ನಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ಸ್ಮಿತ್ ಅವರ ಧೈರ್ಯ ಮತ್ತು ಸಮಯಪ್ರಜ್ಞೆಯಿಂದ ವಿಮಾನದಲ್ಲಿದ್ದ 174 ಪ್ರಯಾಣಿಕರ ಜೀವ ಉಳಿಸಲು ಸಾಧ್ಯವಾಯಿತು ಎಂದು ವರದಿಗಳು ತಿಳಿಸಿವೆ. ಘಟನೆಯ ವೇಳೆ ಗಾಯಗೊಂಡಿದ್ದ ಅವರು ಪ್ರಸ್ತುತ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.

ಇಸ್ರೇಲ್‌ನ ಈ ಪ್ರಶಸ್ತಿಯ ಅಧಿಕೃತ ಹೆಸರು ‘ಪ್ರೆಸಿಡೆನ್ಷಿಯಲ್ ಅವಾರ್ಡ್ ಫಾರ್ ಸಿವಿಲಿಯನ್ ಹೀರೋಯಿಸಂ’. ಜೀವಗಳನ್ನು ಉಳಿಸಲು ಅಸಾಧಾರಣ ಧೈರ್ಯ ಮತ್ತು ಆತ್ಮತ್ಯಾಗ ಪ್ರದರ್ಶಿಸಿದ ನಾಗರಿಕರನ್ನು ಗೌರವಿಸಲು ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಇದು ನಾಗರಿಕ ಶೌರ್ಯಕ್ಕಾಗಿ ನೀಡುವ ಅತ್ಯುನ್ನತ ಗೌರವವಾಗಿದೆ.

ವಿಮಾನದಲ್ಲಿದ್ದ ಪ್ರಯಾಣಿಕರ ಜೀವ ರಕ್ಷಿಸುವಲ್ಲಿ ತೋರಿದ ಅಸಾಧಾರಣ ಸಾಹಸಕ್ಕಾಗಿ ಭಾರತೀಯ ಪೈಲಟ್‌ಗೆ ಇಸ್ರೇಲ್ ಈ ಗೌರವ ನೀಡುತ್ತಿರುವುದು ವಿಶೇಷವಾಗಿದೆ.

More articles

Latest article

Most read