ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಇನ್ನಿಲ್ಲ

ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.  ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ ಇ ಪಿ) ಕರಡು ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಎನ್‌ ಇ ಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದೇ ಕಸ್ತೂರಿರಂಗನ್ ಖ್ಯಾತರಾಗಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. 2003–09 ರವೆರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಯೋಜನಾ ಆಯೋಗದ ಸದಸ್ಯರಾಗಿಯೂ ಮಹತ್ವದ ಕೊಡುಗೆ ನೀಡಿದ್ದರು.  2004ರ ಏಪ್ರಿಲ್‌ನಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾಗಿದ್ದರು.‌

More articles

Latest article

Most read