ಬೆಂಗಳೂರು : ರಾಜ್ಯಾದ್ಯಂತ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಮಾಡಿದೆ.
ರಾಜ್ಯದ 14 ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್ ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು, ವಾಹನ ಸವಾರರು, ರೈತರು ಮುಂಜಾಗ್ರತೆ ಕ್ರಮಗಳನ್ನುಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.

