ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ: ಪ್ರಿಯಾಂಕಾ ಗಾಂಧಿ

Most read

ನವದೆಹಲಿ: ನಿಜವಾದ ಭಾರತೀಯ ಯಾರು ಎಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವ್ಯಾಪ್ತಿಗೆ ಒಳಪಡುವುದಿಲ್ಲ.  ಎಂದು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸಹೋದರನ ಬೆಂಬಲಕ್ಕೆ ನಿಂತಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಹೋದರನಿಗೆ ಸೇನೆಯ ಬಗ್ಗೆ ಅತ್ಯುನ್ನತ ಗೌರವವಿದೆ. ಸೇನೆಯ ವಿರುದ್ಧ ಯಾವತ್ತೂ ಟೀಕಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಅವರಿಗಿದ್ದು ಆ ಕರ್ತವ್ಯವನ್ನು ಅವರು ಮಾಡಿದ್ದಾರೆ. ಆದರೆ ಸರ್ಕಾರ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಬದಲಾಗಿ ಇಂತಹ ತಂತ್ರಗಳ ಮೊರೆ ಹೋಗುತ್ತದೆ. ಸರ್ಕಾರ ಸಂಸತ್ತು ನಡೆಸಲಾರದಷ್ಟು ದುರ್ಬಲವಾಗಿದೆ. ಪ್ರತಿಪಕ್ಷಗಳು ಎತ್ತುವ ವಿಷಯಗಳನ್ನು ಕುರಿತು ಚರ್ಚೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದರು.

More articles

Latest article