ಅಕ್ಟೋಬರ್ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮರ 200ನೇ ವಿಜಯೋತ್ಸವ ಕಾರ್ಯಕ್ರಮ ಕೂಡ ಮಾಡುತ್ತೇವೆ. ಅ.25ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಟಗಳು ಆಯೋಜಿಸಲಾಗುವುದು. ಅದರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.