ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಆಕ್ರೋಶ: ಜಗಳೂರು ಬಂದ್, ಸರ್ಕಾರಿ ಬಸ್ ಕಿಟಕಿ ಒಡೆದ ಕಿಡಿಗೇಡಿಗಳು

ಜಗಳೂರು : ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಜಗಳೂರನ್ನು ಸೇರಿಸದಿರುವುದನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಜಗಳೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಬಹುತೇಕ ಸಂಪೂರ್ಣ ಸ್ಥಗಿತಗೊಂಡಿದೆ.

ಬಂದ್ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಜಗಳೂರು–ಚಳ್ಳಕೆರೆ ರಸ್ತೆಯಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಕಿ ನಂದಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಈ ವೇಳೆ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಾ ನಾಯ್ಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ–ನೂಕಾಟ ನಡೆದಿದೆ. 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸರ್ಕಾರಿ ಬಸ್‌ನಲ್ಲಿ ಕರೆದೊಯ್ದಿದ್ದಾರೆ.

ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಿಡಿಗೇಡಿಗಳು ಸರ್ಕಾರಿ ಬಸ್‌ನ ಕಿಟಕಿ ಗಾಜು ಒಡೆದಿದ್ದಾರೆ. ಗಾಜಿನ ಚೂರುಗಳು ಪೊಲೀಸ್ ವಾಹನದ ಚಾಲಕರ ಕಣ್ಣಿಗೆ ಸಿಡಿದಿರುವ ಘಟನೆ ನಡೆದಿದೆ.

More articles

Latest article

Most read