ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ್ದ ಸತ್ಯ ಪೊಲೀಸರ ವಶಕ್ಕೆ; ಈ ಸತ್ಯ ಯಾರು ಗೊತ್ತೇ?

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗಿತ್ತಿದೆ. ಈ ಘಟನೆ ಬೆಳಕಿಗ ಬಂದ ಕೂಡಲೇ ಎಚ್ಚೆತ್ತ ಪೊಲೀಸರು ಜೈಲಿನಲ್ಲಿದ್ದ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದ ರೌಡಿ ಶೀಟರ್ ಧರ್ಮನ ಮಗ ಸತ್ಯನನ್ನು ವಶಕ್ಕೆ ಪಡೆದಿದ್ದಾರೆ.

ಜೈಲಿನಲ್ಲಿರುವ ದರ್ಶನ್ ಜೊತೆ ರೌಡಿಯ ಪುತ್ರ ಸತ್ಯ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿರುವುದು ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬ್ಯಾಡರಹಳ್ಳಿ ಪೊಲೀಸರು ಸತ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇದಲ್ಲದೇ ಜೈಲಿನ ಏಳು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಈ ವಿಚಾರವನ್ನು ಸಿಎಂ ಗಂಭೀರವಾಗಿ ತೆಗೆದುಕೊಂಡಿದ್ದು, ದರ್ಶನ್‌ ಮತ್ತು ಇನ್ನಿತರರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ನೀಡಿದ್ದಾರೆ.

More articles

Latest article

Most read